ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಮಳೆ; ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು - ವಿಜಯಪುರ

ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಒಳಹರಿವು ಹೆಚ್ಚಾಗುತ್ತಿದೆ. ಇದರ ಜತೆಗೆ ಹಿಪ್ಪರಗಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣ ಒಳಹರಿವು ಮತ್ತಷ್ಟು ಹೆಚ್ಚಾಗಿದೆ.

dam
dam

By

Published : Jun 6, 2020, 10:53 AM IST

ವಿಜಯಪುರ:ಆಲಮಟ್ಟಿ ಜಲಾಶಯಕ್ಕೆ ತಿಂಗಳ ಮೊದಲೇ ಒಳಹರಿವು ಆರಂಭಗೊಂಡಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಪರಿಣಾಮ ಜೂನ್ ಕೊನೆ ವಾರದಲ್ಲಿ ಆರಂಭವಾಗಬೇಕಾಗಿದ್ದ ಒಳಹರಿವು ಮೂರು ವಾರ ಮುಂಚಿತವಾಗಿ ಆರಂಭಗೊಂಡಿದೆ.

ಆಲಮಟ್ಟಿ ಜಲಾಶಯ

ಮೊದಲು ದಿನ ದಿನ 12.761 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬಂದಿದೆ. ಮಹಾರಾಷ್ಟ್ರದ ಕೃಷ್ಣಾ ಕಣವೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಒಳಹರಿವು ಇನ್ನೂ ಹೆಚ್ಚಾಗಲಿದೆ. ಇದರ ಜತೆಗೆ ಹಿಪ್ಪರಗಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣ ಒಳಹರಿವು ಮತ್ತಷ್ಟು ಹೆಚ್ಚಾಗಿದೆ.

ಮಹಾರಾಷ್ಟ್ರ ನೀರು ಕರ್ನಾಟಕಕ್ಕೆ ಬಂದು ಸೇರುವ ರಾಜಾಪೂರ ಬ್ಯಾರೇಜ್ ಬಳಿ ಸಹ ಕೃಷ್ಣಾ ನದಿಯ ಒಳಹರಿವು ಕಳೆದ ನಾಲ್ಕೈದು ದಿನಗಳಿಂದ ಹೆಚ್ಚಾಗಿದೆ. ಶುಕ್ರವಾರ 4.400 ಕ್ಯೂಸೆಕ್ ನೀರು ಇತ್ತು ಎಂದು ಕೆಬಿಜೆಎನ್​ಎಲ್ ಮೂಲಗಳು ತಿಳಿಸಿವೆ.

ಕಳೆದ ವರ್ಷ ಆಲಮಟ್ಟಿ ಜಲಾಶಯಕ್ಕೆ ಜುಲೈ 3ರಿಂದ ಒಳಹರಿವು ಆರಂಭಗೊಂಡಿತ್ತು. ಡಿಸೆಂಬರ್​ನಿಂದ ಒಳಹರಿವು ಸಂಪೂರ್ಣ ನಿಲ್ಲಿಸಲಾಗಿತ್ತು. ಆ ವರ್ಷ ಜಲಾಶಯದ ಇತಿಹಾಸದಲ್ಲಿಯೇ ಅಪಾರ ಪ್ರಮಾಣದ ನೀರು ಹರಿದು ಬಂದಿತ್ತು. ಈ ವರ್ಷ ಏ.10ರವರೆಗೆ ಕಾಲುವೆಗೆ ನೀರು ಹರಿಸಿದ್ದರೂ ಸಹ ಜಲಾಶಯದಲ್ಲಿ ಇನ್ನೂ 27 ಟಿಎಂಸಿ ನೀರು ಸಂಗ್ರಹವಿತ್ತು.

519.60 ಮೀಟರ್ ಎತ್ತರದ ಜಲಾಶಯದಲ್ಲಿ ಇಂದು 509.55 ಮೀಟರ್ ನೀರು ಸಂಗ್ರಹವಿದೆ. ಸದ್ಯ 27.788 ಟಿಎಂಸಿ ನೀರು ಶೇಖರಣೆಯಾಗಿದೆ. ನಿತ್ಯ 14,050 ಮೀಟರ್ ನೀರು ಒಳಹರಿವಿನ ರೂಪದಲ್ಲಿ ಬರುತ್ತಿದ್ದು, 9,780 ಕ್ಯೂಸೆಕ್ ನೀರನ್ನು ಆಲಮಟ್ಟಿ ಜಲಾಶಯದಿಂದ ಬಿಡಲಾಗುತ್ತಿದೆ. ಜಲಾಶಯದ ಗೇಟ್ ಮತ್ತು ವಿದ್ಯುತ್ ಉತ್ಪಾದನಾ ಕೇಂದ್ರದ ಮೂಲಕ 9.150 ಕ್ಯೂಸೆಕ್ ನೀರನ್ನು ನಾರಾಯಣಪುರ ಜಲಾಶಯಕ್ಕೆ ಹರಿದು ಬಿಡಲಾಗುತ್ತಿದೆ.

ABOUT THE AUTHOR

...view details