ವಿಜಯಪುರ: ನಿನ್ನೆಯವರೆಗೂ ಜಿಲ್ಲೆಯಲ್ಲಿ ಸುಮಾರು 66 ಜನ ಕೊರೊನಾ ಶಂಕಿತರಿದ್ದು, ಅದರಲ್ಲಿ ಒಬ್ಬ ವ್ಯಕ್ತಿಗೆ ರೋಗದ ಲಕ್ಷಣಗಳಿದ್ದ ಕಾರಣ ಆತನನ್ನು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಗಂಟಲು ದ್ರವವನ್ನು ಬೆಂಗಳೂರಿನ ಲ್ಯಾಬ್ಗೆ ಪರೀಕ್ಷೆಗೆಂದು ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಹೇಳಿದರು.
ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ: ವಿಜಯಪುರ ಜಿಲ್ಲಾಧಿಕಾರಿ ಸ್ಪಷ್ಟನೆ
ನಿನ್ನೆಯವರೆಗೂ ಜಿಲ್ಲೆಯಲ್ಲಿ ಸುಮಾರು 66 ಜನ ಕೊರೊನಾ ಶಂಕಿತರಿದ್ದು, ಅದರಲ್ಲಿ ಒಬ್ಬ ವ್ಯಕ್ತಿಗೆ ರೋಗದ ಲಕ್ಷಣಗಳಿದ್ದ ಕಾರಣ ಆತನನ್ನು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಗಂಟಲು ದ್ರವವನ್ನು ಬೆಂಗಳೂರಿನ ಲ್ಯಾಬ್ಗೆ ಪರೀಕ್ಷೆಗೆಂದು ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಟ್ರಾವೆಲ್ ಏಜೆನ್ಸಿಯಿಂದ ಮಾಹಿತಿ ಪಡೆಯಲಾಗುತ್ತಿದೆ. ಫೆಬ್ರವರಿ 1ರ ಬಳಿಕ ಬಂದವರನ್ನ ನಾವು ಗುರುತಿಸುತ್ತಿದ್ದೇವೆ. ಈಗಾಗಲೇ 4 ಜನರ ಸ್ಯಾಂಪಲ್ ಲ್ಯಾಬ್ಗೆ ಕಳುಹಿಸಿಕೊಟ್ಟಿದ್ದೆವು. ಅದರಲ್ಲಿ ಎಲ್ಲವೂ ನೆಗೆಟಿವ್ ಆಗಿದ್ದು, ಇನ್ನೊಂದು ವರದಿ ಬರಲಿದೆ ಎಂದರು.
ಇನ್ನು ಮಾಸ್ಕ್ ಬೆಲೆ ಏರಿಕೆ ಹಾವಳಿ ಹೆಚ್ಚಾಗಿರುವ ಕುರಿತು ಗಮನಕ್ಕೆ ಬಂದಿದೆ. ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜಿಲ್ಲೆಯಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಜಿಲ್ಲೆಗೆ ಪ್ರವಾಸಿಗರು ಬಂದಾಗ ತಪಾಸಣೆ ಮಾಡಲಾಗುತ್ತದೆ ಎಂದರು.