ಕರ್ನಾಟಕ

karnataka

ETV Bharat / state

ಸಮಗ್ರ ಕೃಷಿ ಸಂಶೋಧನೆ, ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕ್ರಮ: ಸಚಿವ ಬಿ.ಸಿ. ಪಾಟೀಲ್ - ಸಮಗ್ರ ಕೃಷಿ ಸಂಶೋಧನೆ

ನಮಗೆ ಇಸ್ರೇಲ್ ಕೃಷಿ ಮಾದರಿ ಬೇಡ, ಕೋಲಾರ ಮಾದರಿ ಕೃಷಿ ಬೇಕು. ಸಮಗ್ರ, ಸಾವಯವ ಕೃಷಿಗೆ ಒತ್ತು ನೀಡಬೇಕಾಗಿದೆ. ಹಾಗಾಗಿ ಸಮಗ್ರ ಕೃಷಿ ಸಂಶೋಧನೆ ಹಾಗೂ ಕೌಶಾಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಬೇಡಿಕೆ ಈಡೇರಿಕೆ ಕುರಿತು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ರೈತರೊಂದಿಗೊಂದು ದಿನ ಕಾರ್ಯಕ್ರಮ
ರೈತರೊಂದಿಗೊಂದು ದಿನ ಕಾರ್ಯಕ್ರಮ

By

Published : Feb 24, 2021, 9:55 AM IST

ಮುದ್ದೇಬಿಹಾಳ: ರೈತರ ಪರವಾಗಿ ಮುದ್ದೇಬಿಹಾಳ ಮತ ಕ್ಷೇತ್ರದ ಶಾಸಕರು ಇಟ್ಟಿರುವ ಸಮಗ್ರ ಕೃಷಿ ಸಂಶೋಧನೆ ಹಾಗೂ ಕೌಶಾಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಬೇಡಿಕೆ ಈಡೇರಿಕೆ ಕುರಿತು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಮಂಜೂರು ಮಾಡಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು.

ರೈತರೊಂದಿಗೊಂದು ದಿನ ಕಾರ್ಯಕ್ರಮ

ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಮಂಗಳವಾರ ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಇಷ್ಟು ವರ್ಷ ರೈತರ ಹೆಸರಿನಲ್ಲಿ ಒಂದು ಕಾರ್ಯಕ್ರಮ ಇರಲಿಲ್ಲ. ಅದನ್ನು ನಾವು ಮಾಡಿದ್ದೇವೆ. ನಮಗೆ ಇಸ್ರೇಲ್ ಕೃಷಿ ಮಾದರಿ ಬೇಡ, ಕೋಲಾರ ಮಾದರಿ ಕೃಷಿ ಬೇಕು. ಸಮಗ್ರ, ಸಾವಯವ ಕೃಷಿಗೆ ಒತ್ತು ನೀಡಬೇಕಾಗಿದೆ. ಭೂಮಿಗೆ ನಾವು ವಿಷವನ್ನು ಹಾಕಿ ವಿಷವನ್ನೇ ಉಣ್ಣುತ್ತಿದ್ದೇವೆ. ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದ ರೈತರಲ್ಲಿ ಆತ್ಮಸೈರ್ಯ ತುಂಬುವ ಕೆಲಸವನ್ನು ಈ ಕಾರ್ಯಕ್ರಮದ ಮೂಲಕ ಮಾಡುತ್ತಿದ್ದೇವೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಪ್ರತಿಯೊಬ್ಬ ರೈತರಲ್ಲೂ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಈ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ. ಪ್ರಧಾನಿಗಳ ಆಶಯದಂತೆ ಹಳ್ಳಿಯ ಸರಕನ್ನು ದಿಲ್ಲಿಗೆ ರಫ್ತು ಮಾಡಿ, ರೈತರ ಸಬಲೀಕರಣ ಆಗಲು ಅನುಕೂಲವಾಗಿದೆ. ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಇಟ್ಟಿರುವ ಬೇಡಿಕೆಯನ್ನು ಸಿಎಂ ಗಮನಕ್ಕೆ ತಂದು ಮಂಜೂರು ಮಾಡಿಸಲು ಶ್ರಮಿಸುವುದಾಗಿ ತಿಳಿಸಿದರು.

ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಮಾತನಾಡಿ, ಸಮಗ್ರ ಕೃಷಿ ಸಂಶೋಧನೆ ಹಾಗೂ ಕೌಶಲ್ಯ ಕೇಂದ್ರ ಸ್ಥಾಪಿಸಲು ಅಗತ್ಯ ಮೂಲಸೌಕರ್ಯಗಳನ್ನು ಮುದ್ದೇಬಿಹಾಳ ತಾಲೂಕು ಹೊಂದಿದೆ. ಕೇಂದ್ರ ಮಂಜೂರಾತಿ ಮಾಡಿದ ಒಂದೇ ತಿಂಗಳಲ್ಲಿ ಅದಕ್ಕಾಗಿ ಬೇಕಾದ ಜಮೀನನ್ನು ಹಸ್ತಾಂತರ ಮಾಡುವ ಕಾರ್ಯವನ್ನು ಜಿಲ್ಲಾಧಿಕಾರಿಗಳೊಂದಿಗೆ ಸೇರಿ ಮಾಡುತ್ತೇವೆ ಎಂದರು.

ರೈತರೊಂದಿಗೊಂದು ದಿನ ಕಾರ್ಯಕ್ರಮ

ಈ ವೇಳೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿ.ಪಂ. ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಜಿ.ಪಂ. ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರತಿಭಾ ಪಾಟೀಲ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಎಲ್. ಪಾಟೀಲ್, ತಾ.ಪಂ. ಅಧ್ಯಕ್ಷೆ ಲಕ್ಷ್ಮಿ, ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಗ್ರಾ.ಪಂ. ಅಧ್ಯಕ್ಷ ಶಿದ್ರಾಮಯ್ಯ ಗುರುವಿನ, ಜಂಟಿ ಕೃಷಿ ನಿರ್ದೇಶಕ ಡಾ. ರಾಜಶೇಖರ, ಎಂ.ಹೆಚ್. ಯರಝರಿ ಉಪಸ್ಥಿತರಿದ್ದರು.

ಅದ್ಧೂರಿ ಮೆರವಣಿಗೆ: ಕವಡಿಮಟ್ಟಿ ಗ್ರಾಮಕ್ಕೆ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ ಅವರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಜಲಪೂರ ಕೆರೆಗೆ ಬಾಗಿನ ಅರ್ಪಣೆ ಮಾಡಲು ಸಚಿವರು ತೆರಳಿದರು. ಅಲ್ಲಿಂದ ಎತ್ತಿನಬಂಡಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್​, ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ನಡಹಳ್ಳಿ ಅವರನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು. ಜಿಲ್ಲೆಯ 16 ಸಾಧಕರಿಗೆ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಶಾಸಕರ ನಿವಾಸಕ್ಕೂ ಭೇಟಿ: ಮುದ್ದೇಬಿಹಾಳ ಪಟ್ಟಣದಲ್ಲಿರುವ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ನಿವಾಸಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್, ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಉಪಹಾರ ಸವಿದರು. ಮನೆಗೆ ಆಗಮಿಸಿದ ಸಚಿವರನ್ನು ಶಾಸಕರ ನಡಹಳ್ಳಿ ಅವರ ತಂದೆ ಸಂಗನಗೌಡ ದಂಪತಿ ಸ್ವಾಗತಿಸಿದರು. ಈ ವೇಳೆ ಪುರಸಭೆ ಸದಸ್ಯೆ ಸಹನಾ ಬಡಿಗೇರ, ಬಿಜೆಪಿ ನಾಯಕಿ ಬಸಮ್ಮ ಸಿದರೆಡ್ಡಿ ಮೊದಲಾದವರು ಇದ್ದರು.

ABOUT THE AUTHOR

...view details