ವಿಜಯಪುರ :ಒಂಟಿ ಮಹಿಳೆಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕಳ್ಳತನ ಮಾಡಿರುವ ಘಟನೆ ನಗರದ ಅಕ್ಕಿ ಕಾಲೋನಿಯಲ್ಲಿ ನಡೆದಿದೆ. ಹಲ್ಲೆಗೊಳಾದವರನ್ನು ನಿರ್ಮಲಾ ಸಪ್ಪಡ್ಲಿ ಎಂದು ಗುರುತಿಸಲಾಗಿದೆ.
ಮಹಿಳೆ ಮೇಲೆ ಹಲ್ಲೆ ಮಾಡಿದ ನಂತರ ಮನೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ ಹಾಗೂ 25ಸಾವಿರ ನಗದು ಸೇರಿದಂತೆ ಇತರೆ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಘಟನೆಯಲ್ಲಿ ದುರ್ಷ್ಕಮಿಗಳು ಮಹಿಳೆ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದಿದ್ದಾರೆ. ಈ ವೇಳೆ ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ನಿರ್ಮಲಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.