ವಿಜಯಪುರ: ತುಂಬು ಗರ್ಭಿಣಿಯೊಬ್ಬಳು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಆ್ಯಂಬುಲೆನ್ಸ್ನಲ್ಲಿಯೆ ಮಗುವಿಗೆ ಜನ್ಮ ನೀಡಿದ ಘಟನೆ ಜಿಲ್ಲೆಯಲ್ಲಿ ನಡೆದಿದ್ದು ತಾಯಿ ಮಗು ಸುರಕ್ಷಿತವಾಗಿದ್ದಾರೆ.
108 ರಲ್ಲಿ 'ಲಕ್ಷ್ಮಿ'ಯ ಜನನ : ತಾಯಿ ಮಗಳು ಸುರಕ್ಷಿತ - kannada news
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ತಾಲೂಕು ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ 108 ವಾಹನದಲ್ಲೆ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದಾರೆ.
08 ವಾಹನದಲ್ಲೆ ಹೆಣ್ಣು ಮಗುವಿಗೆ ಜನ್ಮ
ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದಗರ್ಭಿಣಿ ಮಲ್ಲಮ್ಮ ಸಾಬಪ್ಪ ಚಲವಾದಿ108 ವಾಹನದಲ್ಲೆ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದಾರೆ.
108 ಆ್ಯಂಬುಲೆನ್ಸ್ ಸಿಬ್ಬಂದಿ ಮಹಿಳೆಗೆ ಹೆರಿಗೆ ಮಾಡಿ ಸುಸೂತ್ರವಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಪೈಲಟ್ ವಿಜಯಕುಮಾರ ಮತ್ತು ಇಎಂಟಿ ವಿಜಯಕುಮಾರ ಲಿಂಗದಳ್ಳಿ ಸಿಬ್ಬಂದಿಗಳಿಗೆ ಕುಟುಂಬಸ್ಥರು ಧನ್ಯವಾದ ಅರ್ಪಿಸಿದ್ದಾರೆ.