ವಿಜಯಪುರ :ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದನ್ನ ಖಂಡಿಸಿ ಜಿಲ್ಲೆಯ ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದರು.
ಅಕ್ರಮ ಮದ್ಯ ಮಾರಾಟ ಖಂಡಿಸಿ ಮಹಿಳೆಯರ ಪ್ರತಿಭಟನೆ.. - ವಿಜಯಪುರ ಸುದ್ದಿ
ಹೊನ್ನಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ಅಂಗಡಿಗಳು ಇಲ್ಲದಿದ್ರೂ ಕೆಲ ಕಿರಾಣಿ ಅಂಗಡಿ,ಪಾನ್ ಶಾಪ್‌ಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಸುತ್ತಿದ್ದಾರೆ ಎಂದು ಆ ಅಂಗಡಿಗಳ ಮುಂದೆ ನಿಂತು ಪ್ರತಿಭಟನೆ ನಡೆಸಿದರು.
ಅಕ್ರಮ ಮದ್ಯ ಮಾರಾಟ ಖಂಡಿಸಿ ಮಹಿಳೆಯರ ಪ್ರತಿಭಟನೆ
ಹಳ್ಳಿಗಳಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರ ನಿಷೇಧ ಹೇರಬೇಕು. ಮದ್ಯಸೇವನೆ ಮಾಡುವುದರಿಂದ ಅನೇಕ ಕುಟುಂಬಗಳು ಬೀದಿಗೆ ಬರುತ್ತವೆ. ಹೊನ್ನಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ಅಂಗಡಿಗಳು ಇಲ್ಲದಿದ್ರೂ ಕೆಲ ಕಿರಾಣಿ ಅಂಗಡಿ,ಪಾನ್ ಶಾಪ್‌ಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಸುತ್ತಿದ್ದಾರೆ ಎಂದು ಆ ಅಂಗಡಿಗಳ ಮುಂದೆ ನಿಂತು ಪ್ರತಿಭಟನೆ ನಡೆಸಿದರು.
ಈ ವೇಳೆ ಅಕ್ರಮ ಮದ್ಯ ಮಾರಾಟ ಮಾಡುವವರು ಹಾಗೂ ಮಹಿಳೆಯರ ನಡುವೆ ವಾಗ್ವಾದ ನಡೆದಿದ್ದು,ಕೆಲಕಾಲ ಮಾತಿನ ಚಕಮಕಿ ಕೂಡ ನಡೆದಿದೆ.