ವಿಜಯಪುರ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಘದ ಸಂಯುಕ್ತಾಶ್ರಯದಲ್ಲಿ, ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಸಂಚಾರಿ ವಾಹನ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಎನ್ ನಾಯಕ ಸಂಚಾರಿ ವಾಹನ ಜಾಥಾಕ್ಕೆ ಚಾಲನೆ ನೀಡಿದರು.
ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ... ವಿಜಯಪುರದಲ್ಲಿ ಜನ ಜಾಗೃತಿ! - ವಿಶ್ವ ಬಾಲಕಾರ್ಮಿಕ ವಿರೋಧಿ ದಿನ
ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚಾರಿ ವಾಹನದ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಂಡು ಬಾಲ್ಯಾವಸ್ಥೆ ಕಾರ್ಮಿಕ ಪದ್ಧತಿಯ ಕುರಿತು ಧ್ವನಿವರ್ಧಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಸಂಚಾರಿ ವಾಹನವು ಜಿಲ್ಲೆಯ ಎಲ್ಲ ತಾಲೂಕುಗಳ ಪಟ್ಟಣಗಳಲ್ಲಿ ಜೂ.12 ರಿಂದ 20ರವರೆಗೆ ಆರು ದಿನಗಳ ಕಾಲ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ.
![ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ... ವಿಜಯಪುರದಲ್ಲಿ ಜನ ಜಾಗೃತಿ! World day against Child Labor](https://etvbharatimages.akamaized.net/etvbharat/prod-images/768-512-06:14-kn-vjp-04-child-labor-day-av-7202140-12062020175453-1206f-1591964693-660.jpg)
ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಿಲ್ಲಾದ್ಯಂತ ಈ ಸಂಚಾರಿ ವಾಹನ ಮೂಲಕ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಬಾಲ್ಯಾವಸ್ಥೆ ಕಾರ್ಮಿಕ ಪದ್ಧತಿಯ ಕುರಿತು ಧ್ವನಿವರ್ಧಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಸಂಚಾರಿ ವಾಹನವು ಜಿಲ್ಲೆಯ ಎಲ್ಲ ತಾಲೂಕುಗಳ ಪಟ್ಟಣಗಳಲ್ಲಿ ಜೂ.12 ರಿಂದ 20ರವರೆಗೆ ಆರು ದಿನಗಳ ಕಾಲ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ ಎಂದರು.
14 ವರ್ಷದೊಳಗಿನ ದುಡಿಯುವ ಮಕ್ಕಳು ಕಂಡು ಬಂದಲ್ಲಿ ಸಾರ್ವಜನಿಕರು ಜಿಲ್ಲಾಡಳಿತ, ಸಮಾಜಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಅಥವಾ ಕಾರ್ಮಿಕ ಇಲಾಖೆಗೆ ದೂರು ಸಲ್ಲಿಸಬಹುದಾಗಿದೆ. ಪೊಲೀಸ್ ಇಲಾಖೆ ದೂರವಾಣಿ ಸಂಖ್ಯೆ 100, ಕಾರ್ಮಿಕ ಇಲಾಖೆ ಸಂಖ್ಯೆ 250937/242778ಕ್ಕೆ ಜಿಲ್ಲೆಯ ಎಲ್ಲ ತಾಲೂಕು ತಹಶೀಲ್ದಾರರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕ ದೂ. ಸಂ.276354 ಗೆ, ಮಕ್ಕಳ ಸಹಾಯವಾಣಿ 1098 ಸೇರಿದಂತೆ ಜಿಲ್ಲಾಡಳಿತದ ದೂ.ಸಂ; 08352-220041ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ. ನಾವೆಲ್ಲಾ ಒಟ್ಟುಗೂಡಿ ಬಾಲಕಾರ್ಮಿಕ ಪದ್ಧತಿ ವಿರುದ್ಧ ಹೋರಾಡಬೇಕು ಎಂದರು.