ವಿಜಯಪುರ:ಸಮುದಾಯವೊಂದರ ವಿರುದ್ಧಸಾರ್ವಜನಿಕ ವಲಯದಲ್ಲಿ ವಾಟ್ಸ್ಆ್ಯಪ್ ಮೂಲಕ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದರಿಂದ ಸರ್ಕಾರಿ ನೌಕರರೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ವಾಟ್ಸ್ಆ್ಯಪ್ನಲ್ಲಿ ಸುಳ್ಳು ಮಾಹಿತಿ ಭಿತ್ತರಿಸಿದ ಆರೋಪ: ಸರ್ಕಾರಿ ನೌಕರ ಅಮಾನತು - corona lock down
ಸರ್ಕಾರಿ ನೌಕರರಾಗಿದ್ದರೂ ಸಮಾಜದಲ್ಲಿ ತಪ್ಪು-ಸುಳ್ಳು ಮಾಹಿತಿ ಭಿತ್ತರಿಸಿದ್ದರಿಂದ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಯೊಬ್ಬನನ್ನು ಸೇವೆಯಿಂದ ವಜಾಮಾಡಲಾಗಿದೆ.
ಕೊವಿಡ್-19 ವಿಷಮ ಪರಿಸ್ಥಿತಿಯಲ್ಲಿ ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ವಿನಿಮಯ ಮಾಡಿಕೊಳ್ಳದಂತೆ ಈಗಾಗಲೇ ಜಿಲ್ಲಾ ಆಡಳಿತ ವತಿಯಿಂದ ಹಲವು ಬಾರಿ ಎಚ್ಚರಿಕೆ ನೀಡಲಾಗಿದೆ. ಇಷ್ಟಾಗಿಯೂ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಯೊಬ್ಬರು ಸಮಾಜವೊಂದರ ಬಗ್ಗೆ ವ್ಯಾಟ್ಸ್ಆ್ಯಪ್ ಮೂಲಕ ಸಾರ್ವಜನಿಕರಲ್ಲಿ ತಪ್ಪು ತಿಳಿವಳಿಕೆ ಮೂಡುವ ಮಾಹಿತಿ ಭಿತ್ತರಿಸಿದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದೆ.
ಸರ್ಕಾರಿ ನೌಕರರಾಗಿದ್ದರೂ ಸಮಾಜದಲ್ಲಿ ತಪ್ಪು-ಸುಳ್ಳು ಮಾಹಿತಿ ಭಿತ್ತರಿಸಿದ್ದರಿಂದ ಅವರನ್ನು ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮ, ಕಾಯ್ದೆಯಡಿ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಆದೇಶ ಹೊರಡಿಸಿದ್ದಾರೆ.