ವಿಜಯಪುರ:ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಭೇಟಿ ವಿಚಾರವಾಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಮ್ಮ ಫೇಸ್ಬುಕ್ ನಲ್ಲಿ, ತಾವು ಅರುಣಸಿಂಗ್ ಅವರನ್ನು ಭೇಟಿ ಮಾಡಲು ಸಮಯ ಕೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಬಿತ್ತರಿಸಲಾಗಿದೆ ಎಂದಿದ್ದಾರೆ.
ಯತ್ನಾಳ್ ಫೇಸ್ಬುಕ್ ಪೋಸ್ಟ್ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲು ನಾನು ಸಮಯವೇ ಕೇಳಿಲ್ಲ. ಸುಳ್ಳು ಸುದ್ದಿ ಮಾಡಬೇಡಿ ಎಂದು ಮಾಧ್ಯಮದವರಿಗೆ ಫೇಸ್ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಅರುಣ್ ಸಿಂಗ್ ಭೇಟಿ ಮಾಡುವವರ ಪಟ್ಟಿ ಸಹ ಪೋಸ್ಟ್ ಮಾಡಿರುವ ಶಾಸಕ ಯತ್ನಾಳ್ ಅದರಲ್ಲಿ ತಮ್ಮ ಹೆಸರು ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಹೊಸನಗರದಲ್ಲಿ ದಾಖಲೆಯ 320 ಮಿ.ಮೀ ಮಳೆ: ಜೋಗದಲ್ಲಿ ಧುಮ್ಮಿಕ್ಕುತ್ತಿದ್ದಾಳೆ ಶರಾವತಿ