ವಿಜಯಪುರ: ಭೀಮಾತೀರದಲ್ಲಿ ಮತ್ತೆ ರಕ್ತದ ಕೋಡಿ ಹರಿದಿದೆ. ಗ್ರಾಮದಲ್ಲಿ ಅಟ್ಟಾಡಿಸಿಕೊಂಡು ಯುವಕನನ್ನು ಮಚ್ಚು,ಲಾಂಗ್ಗಳಿಂದ ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಿಜಯಪುರದಲ್ಲಿ ಯುವಕನ ಬರ್ಬರ ಕೊಲೆ ಜಿಲ್ಲೆಯ ಚಡಚಣ ತಾಲೂಕಿನ ಜಿರಂಕಲಿ ಗ್ರಾಮದಲ್ಲಿ ದುಷ್ಕರ್ಮಿಗಳು 22 ವರ್ಷದ ಚಂದ್ರಕಾಂತ ಕಟ್ಟಿಮನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗ್ತಿದೆ.
ಈ ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಹಳೆ ದ್ವೇಷದಿಂದ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.