ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ರೈಲು ಮಾರ್ಗದ ಮಧ್ಯೆ ನಡೆದಿದೆ.
ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವಕ ಆತ್ಮಹತ್ಯೆ - A young man commits suicide
ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 25-30 ವರ್ಷದ ಯುವಕನೋರ್ವ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಯುವಕ ಆತ್ಮಹತ್ಯೆ
ಸುಮಾರು 25-30 ವರ್ಷದ ಯುವಕ ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲಿನಿಂದ ಕೆಳಗೆ ಹಾರಿದ್ದಾನೆ. ಗಾಯಾಳುವನ್ನು ತಕ್ಷಣ ರೈಲ್ವೆ ಪೊಲೀಸರು ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು, ವಿಳಾಸ ಇನ್ನೂ ಪತ್ತೆಯಾಗಿಲ್ಲ. ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.