ಮುದ್ದೇಬಿಹಾಳ(ವಿಜಯಪುರ):ವಿಜಯಪುರ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಇಣಚಗಲ್ ಕ್ರಾಸ್ ಸಮೀಪದ ಹೊಲವೊಂದರಲ್ಲಿ ಕಿರು ಸೇತುವೆ ಕೆಳಗೆ ಅಪರಿಚಿತ ಯುವತಿಯೋರ್ವಳ ಕೊಲೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪೊಲೀಸರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.
ಅಂದಾಜು 20-22 ವಯಸ್ಸಿನ ಯುವತಿಯ ಶವ ಪತ್ತೆಯಾಗಿದೆ. ವೇಲ್‌ನಿಂದ ಕುತ್ತಿಗೆಗೆ ಬಿಗಿದು ತಲೆಯನ್ನು ಜಜ್ಜಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಬಳಿಕ ಸೇತುವೆಯ ಕೊಳಾಯಿಯಲ್ಲಿಯೇ ಮೃತದೇಹವನ್ನು ಎಸೆದು ಪರಾರಿಯಾಗಿದ್ದಾರೆ. ಮೃತದೇಹ ನೋಡಿದ ದಾರಿಹೋಕರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.