ಕರ್ನಾಟಕ

karnataka

ETV Bharat / state

ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿ ಪುಸಲಾಯಿಸಿ ಅತ್ಯಾಚಾರ - ಯುವತಿ ಮೇಲೆ ಅತ್ಯಾಚಾರ

ವಿಜಯಪುರ ನಗರದಲ್ಲಿ ಕಳೆದ ಜನವರಿ 17 ರ ತಡರಾತ್ರಿ ಯುವತಿ ಮೇಲೆ ಅತ್ಯಾಚಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌

ಮಹಿಳಾ ಪೊಲೀಸ್ ಠಾಣೆ
ಮಹಿಳಾ ಪೊಲೀಸ್ ಠಾಣೆ

By

Published : Jan 19, 2023, 8:28 PM IST

ವಿಜಯಪುರ:ವಿಜಯಪುರ ನಗರದಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌ ಕಳೆದ ಜನವರಿ 17 ರ ತಡರಾತ್ರಿ ನಡೆದ ಘಟನೆ ಇದಾಗಿದೆ.‌ ಜನವರಿ 17 ರಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿ ಪುಸಲಾಯಿಸಿ ಕೇಂದ್ರ ಬಸ್ ನಿಲ್ಧಾಣದಿಂದ ಕರೆದುಕೊಂಡು ಹೋದ ಮೂವರು ಯುವಕರು ನಗರದ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾಮುಕರು ನಿರ್ಜನ ಪ್ರದೇಶದಲ್ಲಿ ಯುವತಿಯನ್ನು ಹೆದರಿಸಿ ಓರ್ವ ಅತ್ಯಾಚಾರ ಮಾಡಿದ್ದು, ಇದಕ್ಕೆ ಉಳಿದ ಇಬ್ಬರು ಸಾತ್​ ನೀಡಿದ್ದಾರೆ ಎನ್ನಲಾಗಿದೆ.‌

ಓರ್ವನಿಗೆ ಸಹಾಯ ಮಾಡಿದ ಇಬ್ಬರು ಯುವಕರು ಬಳಿಕ ಯುವತಿ ಬಿಟ್ಟು ಅಲ್ಲಿಂದ ಕಾಮುಕರು ಪರಾರಿಯಾಗಿದ್ದಾರೆ.‌ ಬೆಳಗ್ಗೆ ಜನವರಿ 18 ರಂದು ನರುಳುತ್ತಿದ್ದ ಯುವತಿಯನ್ನು ಕಂಡ ಸ್ಥಳೀಯರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಜಯಪುರ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ವಿಜಯಪುರ ಮಹಿಳಾ ಠಾಣೆಯ ಇನ್ಸ್​ಪೆಕ್ಟರ್ ರಾಯಗೊಂಡ ವಿಚಾರಣೆ ನಡೆಸಿದಾಗ ಅತ್ಯಾಚಾರ ವಿಚಾರ ಬಹಿರಂಗವಾಗಿದೆ.‌

ಮೂವರ ಬಂಧನಕ್ಕಾಗಿ ಪೊಲೀಸರ ಶೋಧ ಕಾರ್ಯ: ತನ್ನ ಮೇಲೆ ಅತ್ಯಾಚಾರ ಆಗಿದೆ ಎಂದು ಯುವತಿ ಪೊಲೀಸರ ಎದುರು ತನ್ನ ಮೇಲೆ ಆದ ಕೃತ್ಯವನ್ನು ಎಳೆ ಎಳೆಯಾಗಿ ಬಿಡಿಸಿ ಹೇಳಿದ್ದಾರೆ. ಓರ್ವ ಅತ್ಯಾಚಾರ ಮಾಡಿದ್ದು, ಇನ್ನಿಬ್ಬರು ಆತನಿಗೆ ಸಹಾಯ ಮಾಡಿದ್ದಾರೆ ಎಂದು ಯುವತಿ ಮಾಹಿತಿ ನೀಡಿದ್ದಾರೆ.‌ ಯುವತಿಗೆ ಚಿಕಿತ್ಸೆ ಕೊಡಿಸಿ, ಸರ್ಕಾರಿ ಸ್ವಾಮ್ಯದ ಸ್ವಾದಾರ ಕೇಂದ್ರದಲ್ಲಿ ಪೊಲೀಸರು ಇರಲು ಅವಕಾಶ ಮಾಡಿಕೊಟ್ಟಿದ್ದಾರೆ.‌ ಯುವತಿ ಪುಸಲಾಯಿಸಿ ಕರೆದುಕೊಂಡು ಹೋದ ಮೂವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.‌ ಅತ್ಯಾಚಾರ ಮಾಡಿದ ಓರ್ವ ಹಾಗೂ ಸಹಾಯ ಮಾಡಿದ ಇಬ್ಬರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

ಮೂವರು ಆರೋಪಿಗಳ ಪತ್ತೆಗೆ ಜಾಲ ಬೀಸಿದ ಪೊಲೀಸರು: ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲು ಮಾಡಲಾಗಿದೆ.‌ ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಯುವತಿ ಮಾನಸಿಕ ಅಸ್ವಸ್ಥಳಾಗಿರೋ ಹಾಗೆ ಕಂಡು ಬಂದಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.‌ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸೆರೆ: (ದಕ್ಷಿಣ ಕನ್ನಡ) : ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಗರ್ಭಪಾತ ಪ್ರಕರಣದಲ್ಲಿ ಪ್ರಮುಖ ಆರೋಪಿ ಸುಧೀರ್ ಜೋಗಿ ಎಂಬಾತನನ್ನು ಚಿಕ್ಕಮಗಳೂರಿನಲ್ಲಿ ಬೆಳ್ತಂಗಡಿ ಪೊಲೀಸರು ಸೆರೆ ಹಿಡಿದಿದ್ದಾರೆ. ಡಿಸೆಂಬರ್​ 26, 2021 ರಂದು ಟಿವಿ ನೋಡಲು ತನ್ನ ಮನೆಗೆ ಬರುತ್ತಿದ್ದ ಬಾಲಕಿಯ ಮೇಲೆ ಆರೋಪಿ ದುಷ್ಕೃತ್ಯ ಎಸಗಿದ್ದಾನೆ. ಮತ್ತು ಈತನಿಗೆ ಹಲವರು ಸಾತ್ ನೀಡಿದ್ದರು ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಪೋಕ್ಸೋ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳಡಿ 2023ನೇ ಜನವರಿ 2 ರಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ಪ್ರಕರಣದ ಮೂರನೇ ಆರೋಪಿ ಮನೋಹರ (23) ಮತ್ತು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ನಾಲ್ಕನೇ ಆರೋಪಿ ಮಾಧವ ಯಾನೆ ಮಾಧು(30) ಎಂಬವರನ್ನು ಜನವರಿ 7ರಂದು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಪ್ರಮುಖ ಆರೋಪಿ ಕಡಿರುದ್ಯಾವರ ಗ್ರಾಮದ ಕೊಪ್ಪದಗುಂಡಿ ನಿವಾಸಿ ಸುಧೀರ್ ಜೋಗಿ (27) ಎಂಬವನನ್ನು ಚಿಕ್ಕಮಗಳೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.

ಬಿಲ್ಲವರಿಂದ ಪ್ರತಿಭಟನೆ ಎಚ್ಚರಿಕೆ:ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸದೇ ಪೊಲೀಸರು ಸುಮ್ಮನಿದ್ದಾರೆ. ತಕ್ಷಣ ಆರೋಪಿಯನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಬೃಹತ್ ಪ್ರತಿಭಟನಾ ಸಭೆಯ ಎಚ್ಚರಿಕೆಯನ್ನು ಬಿಲ್ಲವ ಸಮುದಾಯದವರು ನೀಡಿದ್ದರು. ಇದೀಗ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಓದಿ:ಬೆಳ್ತಂಗಡಿ: ಅಪ್ರಾಪ್ತೆಯ ಅತ್ಯಾಚಾರ, ಗರ್ಭಪಾತ ಪ್ರಕರಣದ ಪ್ರಮುಖ ಆರೋಪಿ ಸೆರೆ

ABOUT THE AUTHOR

...view details