ವಿಜಯಪುರ: ಕೇಂದ್ರ ಸರ್ಕಾರದ ಜಾರಿಗೆ ತಂದ ಯೋಜನೆಗಳು ಜನ ವಿರೋಧಿಯಾಗಿವೆ ಎಂದು ಕಾಂಗ್ರೆಸ್ ಯುವ ಸಮಿತಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರ ಎರಡನೇ ಅವಧಿಗೆ ಅಧಿಕಾರ ಹಿಡಿದಿದದ್ದರು ಸಹ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡದೆ ಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುತ್ತಿದೆ, ಎಂದು ಪ್ರತಿಭಟನಾ ನಿರತ ಕಾಂಗ್ರೆಸ್ ಯುವ ಘಟಕ ಕಾರ್ಯಕರ್ತರು ಎನ್‌ಡಿಎ ಸರ್ಕಾಎದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.