ವಿಜಯಪುರ : ಬೈಕ್‌ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಕ್ರಾಸ್ ಬಳಿ ನಡೆದಿದೆ. ಗುರುರಾಜ್ ಶಿರಶ್ಯಾಡ (32) ಮೃತ ಬೈಕ್ ಸವಾರ ಎಂದು ತಿಳಿದುಬಂದಿದೆ.
ಮೃತ ಗುರುರಾಜ್ ಬೈಕ್‌ನಲ್ಲಿ ಹೋಗುವಾಗ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಬೈಕ್ ಡಿಕ್ಕಿಹೊಡೆದಿದ್ದು,ಬೈಕ್ ಸವಾರನ ತಲೆ ಮೇಲೆ ಕ್ಯಾಂಟರ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಕ್ಯಾಂಟರ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಅಪಘಾತದ ದೃಶ್ಯ ಪಕ್ಕದ ಹೋಟೆಲ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.