ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಇಂದು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು.
ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸುಜಾತಾ ಕಳ್ಳಿಮನಿ
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ ಕಳ್ಳಿಮನಿ ಭೇಟಿ ನೀಟಿದ್ದು, ವೈದ್ಯರು, ಸಿಬ್ಬಂದಿ ಹಾಗೂ ರೋಗಿಗಳ ಬಳಿ ತೆರಳಿ ಕುಂದು-ಕೊರತೆಗಳನ್ನು ವಿಚಾರಿಸಿದರು.
ದಿಢೀರ್ ಭೇಟಿ ನೀಡಿದ ವೇಳೆ ಆಸ್ಪತ್ರೆ ಆವರಣದ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿ, ರೋಗಿಗಳ ಚಿಕಿತ್ಸಾ ಕ್ರಮದ ಬಗ್ಗೆ ಆಸ್ಪತ್ರೆಯಲ್ಲಿದ್ದ ಜನರಿಂದ ಮಾಹಿತಿ ಪಡೆದುಕೊಂಡರು. ವೈದ್ಯರು ಹಾಗೂ ಸಿಬ್ಬಂದಿಯಿಂದ ಆಸ್ಪತ್ರೆಯಲ್ಲಿ ಉಂಟಾಗಿರುವ ಕುಂದು-ಕೊರತೆಗಳ ಬಗ್ಗೆ ಆಲಿಸಿ, ಆಸ್ಪತ್ರೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ಭರವಸೆ ನೀಡಿದರು.
ಈ ವೇಳೆ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರಿಗೆ ಸೂಚನೆ ನೀಡಿದರು. ರೋಗಿಗಳ ಯೋಗಕ್ಷೇಮ ವಿಚಾರಿಸಿ, ರೋಗಳಿಂದ ಆಸ್ಪತ್ರೆ ವಿರುದ್ಧ ಯಾವುದೇ ದೂರುಗಳು ಬರದಂತೆ ಕಾರ್ಯನಿರ್ವಹಣೆ ಮಾಡುವಂತೆ ತಿಳಿಸಿದರು.