ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 102 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 4,929ಕ್ಕೇರಿದ್ದು,ಮೃತರ ಸಂಖ್ಯೆ 35 ಆಗಿದೆ.
ಯಾದಗಿರಿ: 102 ಕೋವಿಡ್ ಪ್ರಕರಣಗಳು ಪತ್ತೆ, ಇಬ್ಬರು ಬಲಿ - Yadgiri latest news
ಜಿಲ್ಲೆಯಲ್ಲಿಂದು ಇಬ್ಬರು ಮಹಾಮಾರಿ ಸೋಂಕಿಗೆ ಬಲಿಯಾಗಿದ್ದು, 102 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,929ಕ್ಕೆ ಏರಿಕೆಯಾಗಿದೆ.
Yadgiri corona cases
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 78 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 3,280 ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಸದ್ಯ 1,614 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ವರದಿಯಾದ 102 ಪ್ರಕರಣಗಳಲ್ಲಿ, 61 ಸೋಂಕಿತರು ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 20 ಜನರು ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನುಳಿದ 21 ಪ್ರಕರಣಗಳು ಸುರಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದವರಾಗಿದ್ದಾರೆ.