ಕರ್ನಾಟಕ

karnataka

ETV Bharat / state

ಯಾದಗಿರಿಯಲ್ಲಿಂದು 107 ಪ್ರಕರಣ ಪತ್ತೆ: ಇಬ್ಬರು ಸೋಂಕಿಗೆ ಬಲಿ - cases found in Yadgir

ಯಾದಗಿರಿ ಜಿಲ್ಲೆಯಲ್ಲಿಂದು 25 ಜನರು ಸಂಪೂರ್ಣ ಗುಣಮುಖರಾಗಿದ್ದು, 107 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1078 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾದಗಿರಿ
ಯಾದಗಿರಿ

By

Published : Aug 12, 2020, 10:13 PM IST

ಯಾದಗಿರಿ:ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 25 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 2241 ಮಂದಿ ಗುಣಮುಖರಾಗಿದ್ದಾರೆ. ಇಂದು ಹೊಸದಾಗಿ 107 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3338ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1078 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 19 ಜನರು ಮೃತಪಟ್ಟಿದ್ದಾರೆ. ಇಂದು ವರದಿಯಾದ 107 ಪ್ರಕರಣಗಳಲ್ಲಿ 56 ಜನ ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 30 ಜನ ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನುಳಿದ 21 ಪ್ರಕರಣಗಳು ಸುರಪುರ ನಗರ ಹಾಗೂ ಗ್ರಾಮೀಣ ಪ್ರದೇಶದವರಾಗಿದ್ದಾರೆ.

ಇಂದು ಸೋಂಕು ಪತ್ತೆಯಾದವರನ್ನೆಲ್ಲಾ ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ನೂತನ ಜಿಲ್ಲಾಸ್ಪತ್ರೆ ಸೇರಿದಂತೆ 3 ಕೋವಿಡ್ ಕೇರ್ ಸೆಂಟರ್​​ಗಳಿಗೆ ದಾಖಲಿಸಲಾಗಿದೆ.

ABOUT THE AUTHOR

...view details