ಯಾದಗಿರಿ: ಇಂದು ಜಿಲ್ಲೆಯಲ್ಲಿ 123 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,500ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಒಬ್ಬರು ಬಲಿಯಾಗಿದ್ದು ಮೃತರ ಸಂಖ್ಯೆ 31ಕ್ಕೇರಿದೆ.
ಯಾದಗಿರಿ: 123 ಮಂದಿಗೆ ಸೋಂಕು ದೃಢ, ಓರ್ವ ಬಲಿ
ಜಿಲ್ಲೆಯಲ್ಲಿಂದು 123 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ ಮತ್ತು ಒಂದು ಮೃತ ಪ್ರಕರಣ ವರದಿಯಾಗಿದೆ.
Yadgiri corona cases
ಇಂದು ಯಾದಗಿರಿಯ 52, ಶಹಾಪುರದ 41, ಸುರಪೂರದ 30 ಸೋಂಕು ಪ್ರಕರಣಗಳು ವರದಿಯಾಗಿವೆ. ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 34 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ. ಒಟ್ಟಾರೆ ಈವರೆಗೆ 2,916 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ 1553 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.