ಯಾದಗಿರಿ: ಜಿಲ್ಲೆಯಲ್ಲಿಂದು ಮತ್ತೆ 13 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 894 ಕ್ಕೆ ಏರಿಕೆಯಾಗಿದೆ.
ಯಾದಗಿರಿಯಲ್ಲಿಂದು 13 ಜನರಲ್ಲಿ ಸೋಂಕು ಪತ್ತೆ....567 ಮಂದಿ ಗುಣಮುಖ - ಯಾದಗಿರಿ ಲೆಟೆಸ್ಟ್ ನ್ಯೂಸ್
2 ವರ್ಷದ ಮಗು ಸೇರಿದಂತೆ ಒಟ್ಟು 13 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೆ 567 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 326 ಪ್ರಕರಣಗಳು ಸಕ್ರಿಯವಾಗಿವೆ.
2 ವರ್ಷದ ಮಗು ಸೇರಿದಂತೆ ಒಟ್ಟು 13 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಆಗಮಿಸಿದ 11 ವಲಸಿಗರು ಸೇರಿದಂತೆ P-9633 ಮತ್ತು P-9634ರಲ್ಲಿ ಸೋಂಕು ಧೃಢಪಟ್ಟಿದೆ. P-9334ಗೆ P-6111ರ ಸಂಪರ್ಕ ಹೊಂದಿದ್ದರಿಂದ ಸೋಂಕು ತಗುಲಿದ್ದು ದೃಢಪಟ್ಟಿದ್ದರೆ, P-9633ರ ಸಂಪರ್ಕ ಪತ್ತೆ ಕಾರ್ಯದಲ್ಲಿ ಜಿಲ್ಲಾಡಳಿತ ತೊಡಗಿದೆ.
ಇನ್ನೂ ಇಂದು ಸೋಂಕು ಪತ್ತೆಯಾದವರನ್ನೆಲ್ಲರನ್ನು ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು ಸೋಂಕಿತರ ಪೈಕಿ ಇಲ್ಲಿಯವರೆಗೆ 567 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 326 ಪ್ರಕರಣಗಳು ಸಕ್ರಿಯವಾಗಿವೆ. ವೃದ್ಧೆಯೊಬ್ಬರು ಮೃತಪಟ್ಟಿರುತ್ತಾರೆ.