ಕರ್ನಾಟಕ

karnataka

ETV Bharat / state

ಯಾದಗಿರಿಯಲ್ಲಿಂದು 16 ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 1,043 ಕ್ಕೆ ಏರಿಕೆ

ಯಾದಗಿರಿ ಜಿಲ್ಲೆಯಲ್ಲಿ ಇಂದು 16 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,043 ಕ್ಕೆ ಏರಿಕೆಯಾಗಿದೆ.

Yadagir
Yadagir

By

Published : Jul 10, 2020, 2:23 PM IST

ಯಾದಗಿರಿ: ಕೊರೊನಾ ವೈರಸ್ ಹಾವಳಿ ಮುಂದುವರೆದಿದ್ದು ಜಿಲ್ಲೆಯಲ್ಲಿಂದು 4 ವರ್ಷದ ಬಾಲಕಿ ಸೇರಿದಂತೆ ಒಟ್ಟು 16 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,043 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಿಂದ ಆಗಮಿಸಿದ ವಲಸಿಗರಲ್ಲೇ ಹೆಚ್ಚಿನ ಪ್ರಮಾಣದಲ್ಲಿ ವೈರಸ್ ಪತ್ತೆಯಾಗುತ್ತಿದೆ. ಇಂದು ಪತ್ತೆಯಾದ ಪ್ರಕರಣಗಳ ಪೈಕಿ (ಪಿ 29032), (ಪಿ 29033), (ಪಿ 29034), (ಪಿ 29035), (ಪಿ 29036), (ಪಿ 29037), (ಪಿ 29038) ಈ ಏಳು ಜನರು (ಪಿ 15476) ನೇ ಸಂಖ್ಯೆಯ ಸೋಂಕಿತ ವ್ಯಕ್ತಿಯ ಸಂಪರ್ಕ ಹೊಂದಿದ್ದಾರೆ.

(ಪಿ 29040), (ಪಿ 2941), (ಪಿ 29043), (ಪಿ 29046) ಈ ನಾಲ್ಕು ಜನ (ಪಿ 13411) ಸಂಪರ್ಕದ ಹಿನ್ನೆಲೆ ಹೊಂದಿದ್ದಾರೆ. ಇನ್ನು ನಾಲ್ಕು ಜನರ ಸಂಪರ್ಕ ಪತ್ತೆ ಕಾರ್ಯದಲ್ಲಿ ಜಿಲ್ಲಾಡಳಿತ ತೊಡಗಿದ್ದು, ಮಹಾರಾಷ್ಟ್ರದಿಂದ ವಾಪಸ್‌ ಆಗಿರುವ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಇನ್ನು ಒಟ್ಟು ಪ್ರಕರಣಗಳ ಪೈಕಿ ಇಲ್ಲಿಯವರೆಗೆ 872 ಜನ ಕೊರೊನಾ ವೈರಸ್ ನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 170 ಪ್ರಕರಣಗಳು ಸಕ್ರೀಯವಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ. ಇಂದು ಸೋಂಕು ಪತ್ತೆಯಾದವರನ್ನು ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿದೆ.

ABOUT THE AUTHOR

...view details