ಕರ್ನಾಟಕ

karnataka

ETV Bharat / state

ಯಾದಗಿರಿಯಲ್ಲಿ 200 ಮಂದಿಯಲ್ಲಿ ಕೊರೊನಾ ಪತ್ತೆ: 25 ಜನ ಡಿಸ್ಚಾರ್ಜ್​! - ಕೋವಿಡ್ 19

ಯಾದಗಿರಿ ಜಿಲ್ಲೆಯಲ್ಲಿ ಒಟ್ಟಾರೆ ಇದುವರೆಗೆ 2,088 ಮಂದಿ ಗುಣಮುಖರಾಗಿದ್ದಾರೆ. ಹೊಸದಾಗಿ 200 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 2,970ಕ್ಕೆ ಏರಿಕೆಯಾಗಿದೆ.

ಯಾದಗಿರಿ

By

Published : Aug 9, 2020, 4:18 AM IST

ಯಾದಗಿರಿ:ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಶನಿವಾರ 25 ಜನ ಗುಣಮುಖರಾಗಿ ಡಿಸ್ಚಾರ್ಜ್​​ ಆಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟಾರೆ ಇದುವರೆಗೆ 2,088 ಮಂದಿ ಗುಣಮುಖರಾಗಿದ್ದಾರೆ. ಹೊಸದಾಗಿ 200 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 2,970ಕ್ಕೆ ಏರಿಕೆಯಾಗಿದೆ.

ಒಟ್ಟು 866 ಮಂದಿ ಸೋಂಕಿತರು ಸಕ್ರಿಯವಾಗಿದ್ದು, ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದುವರೆಗೂ 16 ಜನ ಬಲಿಯಾಗಿದ್ದಾರೆ.

ಶನಿವಾರ ವರದಿಯಾದ 200 ಪ್ರಕರಣಗಳಲ್ಲಿ 93 ಜನ ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶವರಿದ್ದರೇ 72 ಜನ ಶಹಾಪುರ ಹಾಗೂ 35 ಸೋಂಕಿತರು ಸುರಪುರದವರಾಗಿದ್ದಾರೆ. ಸೋಂಕಿತರನ್ನು ಜಿಲ್ಲೆಯ ಕೋವಿಡ್ ಕೇರ್ ಸೆಂಟರ್​​ಗಳಿಗೆ ದಾಖಲಿಸಲಾಗಿದೆ.

ABOUT THE AUTHOR

...view details