ಯಾದಗಿರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 235 ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 7,023ಕ್ಕೆ ಏರಿಕೆಯಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಮತ್ತೆ 235 ಕೊರೊನಾ ಪ್ರಕರಣಗಳು ಪತ್ತೆ - yadgiri corona news
ಯಾದಗಿರಿ ಜಿಲ್ಲೆಯಲ್ಲಿಂದು ಒಂದೇ ದಿನದಲ್ಲಿ ಮತ್ತೆ 235 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.
ಯಾದಗಿರಿ
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಮತ್ತೆ 412 ಜನರು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗುವ ಮೂಲಕ ಇಲ್ಲಿಯವರೆಗೆ 5,739 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 46 ಜನರು ಮೃತಪಟ್ಟಿದ್ದಾರೆ.
ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1,238 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.