ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಇಂದು 81 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 9,124 ಏರಿಕೆಯಾಗಿದೆ.
ಯಾದಗಿರಿಯಲ್ಲಿ 24 ಕೋವಿಡ್ ಪ್ರಕರಣಗಳು ಪತ್ತೆ: 81 ಮಂದಿ ಡಿಸ್ಚಾರ್ಜ್ - ಯಾದಗಿರಿ ಕೊರೊನಾ ವೈರಸ್ ಪ್ರಕರಣಗಳು
ಯಾದಗಿರಿ ಜಿಲ್ಲೆಯಲ್ಲಿಂದು ಹೊಸದಾಗಿ 24 ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿದ್ದು, 81 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಯಾದಗಿರಿ
ಜಿಲ್ಲೆಯಲ್ಲಿಂದು ಹೊಸದಾಗಿ 24 ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,753 ಕ್ಕೆ ಏರಿಕೆಯಾಗಿದೆ. ಜೊತೆಗೆ ಇಲ್ಲಿಯ ವರೆಗೆ 60 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 569 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಣನೀಯವಾಗಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ.