ಯಾದಗಿರಿ: ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ 27 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,612ಕ್ಕೆ ಏರಿಕೆಯಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಕೊರೊನಾ: 97 ಜನ ಗುಣಮುಖ
ಬುಧವಾರದಂದು ಯಾದಗಿರಿ ಜಿಲ್ಲೆಯಲ್ಲಿ 27 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಯಾದಗಿರಿ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ನಿನ್ನೆ 97 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,778 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 60 ಜನ ಮೃತಪಟ್ಟಿದ್ದಾರೆ.
ಒಟ್ಟು 774 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.