ಯಾದಗಿರಿ: ಜಿಲ್ಲೆಯಲ್ಲಿ ನಿನ್ನೆ 27 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,935 ಕ್ಕೆ ಏರಿಕೆಯಾಗಿದೆ.
ಯಾದಗಿರಿ: ಹೊಸದಾಗಿ 27 ಕೊರೊನಾ ಸೋಂಕಿತರು ಪತ್ತೆ - Corona update news
ಯಾದಗಿರಿ ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 27 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 27 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
![ಯಾದಗಿರಿ: ಹೊಸದಾಗಿ 27 ಕೊರೊನಾ ಸೋಂಕಿತರು ಪತ್ತೆ Yadagir](https://etvbharatimages.akamaized.net/etvbharat/prod-images/768-512-09:09:48:1603597188-kn-ydr-04-24-covid-positive-av-7208689-24102020212508-2410f-1603554908-341.jpg)
Yadagir
ಕೋವಿಡ್ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾದವರಲ್ಲಿ ನಿನ್ನೆ 27 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,558 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮತ್ತು ಇಲ್ಲಿಯವರೆಗೆ ಒಟ್ಟು 60 ಜನ ಮೃತಪಟ್ಟಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 317 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಾದಗಿರಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ.