ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 30 ಜನರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟಾರೆ ಇದುವರೆಗೆ 3184 ಮಂದಿ ಗುಣಮುಖರಾಗಿದ್ದಾರೆ.
ಯಾದಗಿರಿ : ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ಜನ ಡಿಸ್ಚಾರ್ಜ್ - Detecting Covid Cases
ಯಾದಗಿರಿ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ಜನರು ಇಂದು ಡಿಸ್ಚಾರ್ಜ್ ಆಗಿದ್ದಾರೆ. ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಇಂದು ಹೊಸದಾಗಿ 122 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4695ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1478 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾ ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 33 ಜನರು ಮೃತಪಟ್ಟಿದ್ದಾರೆ. ಇಂದು ವರದಿಯಾದ 122 ಪ್ರಕರಣಗಳಲ್ಲಿ 39 ಜನ ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 62 ಜನ ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನುಳಿದ 21 ಪ್ರಕರಣಗಳು ಸುರಪೂರ ತಾಲೂಕಿನ ನಗರ ಮತು ಗ್ರಾಮೀಣ ಪ್ರದೇಶದವರಾಗಿದ್ದಾರೆ.