ಯಾದಗಿರಿ:ಜಿಲ್ಲೆಯಲ್ಲಿಂದು ಹೊಸದಾಗಿ 42 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 7929ಕ್ಕೆ ಏರಿಕೆಯಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ 42 ಕೊರೊನಾ ಪ್ರಕರಣ ಪತ್ತೆ - corona positive cases latest news
ಯಾದಗಿರಿ ಜಿಲ್ಲೆಯಲ್ಲಿನ ಇಂದಿನ ಕೊರೊನಾ ಅಂಕಿ-ಸಂಖ್ಯೆ ಹೀಗಿದೆ.

ಯಾದಗಿರಿ ಜಿಲ್ಲೆ
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 86 ಜನ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ಇಲ್ಲಿಯವರೆಗೆ 7082 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗೆಯಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಒಟ್ಟು 49 ಜನರು ಮೃತಪಟ್ಟಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 798 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.