ಯಾದಗಿರಿ:ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಬಿಡುಗಡೆಯಾಗಿದೆ. ಅರ್ಹ ಫಲಾನುಭವಿಗಳಿಗೆ ನಿಗಮದ ಅನುದಾನ ತಲುಪುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಮಾಜಿ ಸಚಿವರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮತ್ತು ಇತರೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಬೆಸ್ತ, ಕೋಳಿ, ಕಬ್ಬಲಿಗ, ಮೊಗವೀರ ಮತ್ತು ಇದರ ಉಪ ಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನದ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಗಮದ ಅನುದಾನ ತಲುಪುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು.