ಕರ್ನಾಟಕ

karnataka

ETV Bharat / state

ವಾಲ್ಮೀಕಿ ಸಮಾಜಕ್ಕೆ 7.5% ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ರೇ ರಾಜೀನಾಮೆ : ಶಾಸಕ ರಾಜುಗೌಡ - ವಾಲ್ಮೀಕಿ ಸಮಾಜಕ್ಕೆ 7.5% ಮೀಸಲಾತಿ

ಎಸ್​​ಟಿ ಪಂಗಡಕ್ಕೆ ಕೋಲಿ ಮತ್ತು ಕುರುಬ ಸಮುದಾಯವನ್ನು ಸೇರ್ಪಡೆ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಈಗಿರುವ ಮೀಸಲು ಪ್ರಮಾಣದಲ್ಲಿ ಎಲ್ಲರೂ ಸೌಲಭ್ಯ ಪಡೆಯಲು ಸಾಧ್ಯವಾಗದು..

7-dot-5-percent-reservation-rate-for-valmiki-cast
ಶಾಸಕ ರಾಜುಗೌಡ

By

Published : Sep 6, 2020, 9:11 PM IST

ಸುರಪುರ : ವಾಲ್ಮೀಕಿ ಸಮಾಜಕ್ಕೆ 7.5%ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ದಲ್ಲಿ ಸಮಾಜದ 15 ಶಾಸಕರು ಹಾಗೂ ಇಬ್ಬರು ಸಂಸದರು ರಾಜೀನಾಮೆ ನೀಡಲು ಸಿದ್ಧರಿದ್ದೇವೆ ಎಂದು ಶಾಸಕ ರಾಜುಗೌಡನಾಯಕ ಹೇಳಿದರು.

ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆದ ರಾಜ್ಯಮಟ್ಟದ ಸಭೆಯಲ್ಲಿ ಶಾಸಕ ನರಸಿಂಹ ನಾಯಕ ರಾಜುಗೌಡ ಭಾಗವಹಿಸಿ ಮಾತನಾಡಿ, ನಮ್ಮ ವಾಲ್ಮೀಕಿ ಸಮಾಜಕ್ಕೆ 7.5 % ಮೀಸಲಾತಿ ಪ್ರಮಾಣ ಹೆಚ್ಚಿಸದಿದ್ದಲ್ಲಿ ಸ್ವಾಮೀಜಿಯವರು ಹೇಳಿದರೆ, ವಾಲ್ಮೀಕಿ ಸಮಾಜದ 15 ಜನ ಶಾಸಕರು ಹಾಗೂ ಇಬ್ಬರು ಸಂಸದರು ರಾಜೀನಾಮೆ ನೀಡಲು ಸಿದ್ಧರಿದ್ದೇವೆ ಎಂದು ಘೋಷಣೆ ಮಾಡಿದರು.

ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆದ ರಾಜ್ಯ ಮಟ್ಟದ ಸಭೆ

ಎಸ್​​ಟಿ ಪಂಗಡಕ್ಕೆ ಕೋಲಿ ಮತ್ತು ಕುರುಬ ಸಮುದಾಯವನ್ನು ಸೇರ್ಪಡೆ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಈಗಿರುವ ಮೀಸಲು ಪ್ರಮಾಣದಲ್ಲಿ ಎಲ್ಲರೂ ಸೌಲಭ್ಯ ಪಡೆಯಲು ಸಾಧ್ಯವಾಗದು.

ಆದ್ದರಿಂದ ಮೀಸಲಾತಿ ಪ್ರಮಾಣ 7.5%ಗೆ ಹೆಚ್ಚಿಸಬೇಕು. ಇದಕ್ಕಾಗಿ ನಾವೆಲ್ಲರೂ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ABOUT THE AUTHOR

...view details