ಯಾದಗಿರಿ :ಜಿಲ್ಲೆಯಲ್ಲಿ 880 ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ, ಜೊತೆಗೆ 73 ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ಗಳೆಂದು ಗುರುತಿಸಲಾಗಿದೆ.
ಯಾದಗಿರಿಯಲ್ಲಿ 73 ಕಂಟೈನ್ಮೆಂಟ್ ಝೋನ್ಗಳ ಘೋಷಣೆ...ಸರ್ಕಾರದ ನಿಯಮಕ್ಕಿಲ್ಲ ಕಿಮ್ಮತ್ತು - yadgir corona news
ಯಾದಗಿರಿಲ್ಲಿ 73 ಪ್ರದೇಶಗನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿದೆ ಹೊರತು, ಕಂಟೈನ್ಮೆಂಟ್ ಝೋನ್ನಲ್ಲಿ ನಿಯಮಗಳ ಪಾಲನೆ ಆಗುತ್ತಿದೆಯಾ ಇಲ್ವ ಎಂದು ನೋಡಿಕೊಳ್ಳುತ್ತಿಲ್ಲ.
ಜಿಲ್ಲಾಡಳಿತ 73 ಪ್ರದೇಶಗನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿದೆ ಹೊರತು, ಕಂಟೈನ್ಮೆಂಟ್ ಝೋನ್ನಲ್ಲಿ ನಿಯಮಗಳ ಪಾಲನೆ ಆಗುತ್ತಿದೆಯಾ ಇಲ್ವ ಎಂದು ನೋಡಿಕೊಳ್ಳುತ್ತಿಲ್ಲ. ಅಧಿಕಾರಿಗಳು ಗಸ್ತು ತಿರುಗುತ್ತಿಲ್ಲ, ಪೊಲೀಸರ ಕಾವಲು ಸಹ ಇಲ್ಲ. ಸ್ಥಳೀಯ ಸಂಸ್ಥೆಗಳು ಈ ಪ್ರದೇಶದ ಜನರಿಗೆ ಅಗತ್ಯ ವಸ್ತುಗಳ ಪೂರೈಕೆ ಸಹ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಜನರು ಕಂಟೈನ್ಮೆಂಟ್ ಝೋನ್ನಲ್ಲಿ ಬೇಕಾ ಬಿಟ್ಟಿಯಾಗಿ ಓಡಾಟ ನಡೆಸಿ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಬಂದ ವಲಸೆ ಕಾರ್ಮಿಕರಲ್ಲೇ ಹೆಚ್ಚು ಸೋಂಕು ಪತ್ತೆಯಾಗಿತ್ತು, ಇದೀಗ ಜಿಲ್ಲೆಯಲ್ಲಿ ಸೋಂಕು ಸಮುದಾಯಕ್ಕೂ ವ್ಯಾಪಿಸಿದೆ. ಕಂಟೈನ್ಮೆಂಟ್ ಝೋನ್ನಲ್ಲಿ ನಿಯಮ ಪಾಲನೆ ಆಗದಿದ್ರೆ ಮುಂದಿನ ದಿನಗಳಲ್ಲಿ ಸೋಂಕು ದೊಡ್ಡ ಪ್ರಮಾಣದಲ್ಲಿ ವ್ಯಾಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.