ಯಾದಗಿರಿ: ಜಿಲ್ಲೆಯಲ್ಲಿ ಇಂದು 94 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 5,848ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಯಾದಗಿರಿಯಲ್ಲಿ ಇಂದು 94 ಜನರಿಗೆ ಕೊರೊನಾ ಸೋಂಕು ಪತ್ತೆ - today yadagiri corona
ಯಾದಗಿರಿ ಜಿಲ್ಲೆಯಲ್ಲಿ ಇಂದು 94 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಇದುವರೆಗೂ 41 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಯಾದಗಿರಿಯಲ್ಲಿ ಇಂದು 94 ಜನರಿಗೆ ಕೊರೊನಾ ಸೋಂಕು ಪತ್ತೆ
ಇದುವರೆಗೆ 4,303 ಜನರು ಗುಣಮುಖರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 41 ಜನರು ಮೃತಪಟ್ಟಿದ್ದು, ಸಕ್ರಿಯ ಪ್ರಕರಣಗಳು 1,504 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
31ಸೋಂಕಿತರು ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶದವರು, 35 ಜನ ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರಾಗಿದ್ದಾರೆ. ಇನ್ನೂಳಿದ 28 ಜನ ಸುರಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದವರಾಗಿದ್ದಾರೆ.