ಮುದ್ದೇಬಿಹಾಳ (ವಿಜಯಪುರ):ಮಾಸಿಕ 12 ಸಾವಿರ ರೂ ವೇತನ ಹಾಗೂ ಆರೋಗ್ಯ ರಕ್ಷಣಾ ಸಾಮಗ್ರಿ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ತಾಲೂಕು ಪಂಚಾಯಿತಿ ಅಧೀಕ್ಷಕರ ಮುಖಾಂತರ ಸಿಎಂಗೆ ಮನವಿ ಪತ್ರ ಸಲ್ಲಿಸಲಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸಿಎಂಗೆ ಮನವಿ - vijayapur ldistrict muddebihal taluk
ಮಾಸಿಕ 12 ಸಾವಿರ ರೂ ವೇತನ ಹಾಗೂ ಆರೋಗ್ಯ ರಕ್ಷಣಾ ಸಾಮಗ್ರಿ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಸಿಎಂಗೆ ಮನವಿ ಸಲ್ಲಿಸಲಾಯಿತು.
ವಿವಿಧ ಬೇಡಿಕೆ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರಿಂದ ಸಿಎಂಗೆ ಮನವಿ ಪತ್ರ
ತಾಲೂಕು ಪಂಚಾಯಿತಿ ಪ್ರಭಾರಿ ಲೆಕ್ಕ ಅಧೀಕ್ಷಕ ಎನ್.ಎಂ.ಬಿಸ್ಟಗೊಂಡ ಅವರಿಗೆ ಮನವಿ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ನಮಗೆ ಜೀವನ ಭದ್ರತೆ ಹಾಗೂ ಯಾವುದೇ ಹೆಚ್ಚಿನ ವೇತನ ಇರುವುದಿಲ್ಲ.
ಜುಲೈ 10ರಿಂದಲೇ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಈವರೆಗೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.