ಕರ್ನಾಟಕ

karnataka

ETV Bharat / state

ಪತಿ ಸಾವಿನಿಂದ ಮನನೊಂದ ಮಹಿಳೆ : ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣು - ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣು

ಪತಿ ಸಾವಿನಿಂದ ಮಾನಸಿಕವಾಗಿ ನೊಂದಿರುವ ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ನಗರದಲ್ಲಿ ನಡೆದಿದೆ.

ಪತಿ ಸಾವಿನಿಂದ ನೊಂದು ಮಹಿಳೆ
A woman committed suicide at Yadgiri

By

Published : Jan 16, 2020, 8:23 PM IST

ಯಾದಗಿರಿ:ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ನಗರದ ಡಿಗ್ರಿ ಕಾಲೇಜ್ ಬಳಿ ನಡೆದಿದೆ.

ಪತಿ ಸಾವಿನಿಂದ ನೊಂದು ಮಹಿಳೆ ಆತ್ಮಹತ್ಯೆಗೆ ಶರಣು

35 ವರ್ಷದ ದೇವಿಂದ್ರಮ್ಮ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯಾಗಿದ್ದು, ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಜಾಕನಾಪಲ್ಲಿ ಗ್ರಾಮದವರಾಗಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಪತಿಯ ನಿಧನದಿಂದ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದು ಬಂದಿದೆ. ಇವರು ಮಗನೊಂದಿಗೆ ಕಣ್ಣಿನ ಚಿಕಿತ್ಸೆಗಾಗಿ ನಗರಕ್ಕೆ ಆಗಮಿಸಿದ್ದು, ಈ ವೇಳೆ ಮಗನಿಗೆ ನೀರು ತರುವುದಾಗಿ ಹೇಳಿ ರೈಲ್ವೇ ನಿಲ್ದಾಣಕ್ಕೆ ತೆರಳಿ ಅಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಕುರಿತು ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details