ಯಾದಗಿರಿ: ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ, ಶಹಾಪುರ ತಾಲೂಕಿನ ಮಹಲರೋಜಾ ಗ್ರಾಮದಲ್ಲಿ ನಡೆದಿದೆ. ಸಗರ ಗ್ರಾಮದ ನಿವಾಸಿ ಶಿವರಾಜ ತಂದೆ ರಾಮಣ್ಣ ಭಜಂತ್ರಿ (25) ಎಂಬ ಯುವಕ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಕಾಯಿಲೆಯಿಂದ ಮನನೊಂದ ಯುವಕ ಆತ್ಮಹತ್ಯೆ - a young boy suicide in Yadagiri
ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ, ಶಹಾಪುರ ತಾಲೂಕಿನ ಮಹಲರೋಜಾ ಗ್ರಾಮದಲ್ಲಿ ನಡೆದಿದೆ.
ಕಾಯಿಲೆಯಿಂದ ಮನನೊಂದ ಯುವಕ ಆತ್ಮಹತ್ಯೆ
ಮಹಲರೋಜಾ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ಹಿಂಬದಿಯ ಗುಡ್ಡದ ಬಳಿ, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶಿವರಾಜ ಶವ ಪತ್ತೆಯಾಗಿದೆ. ಹಾಗೂ ಘಟನಾ ಸ್ಥಳದಲ್ಲಿ ದ್ವಿಚಕ್ರ ವಾಹನ ಪತ್ತೆಯಾಗಿದೆ. ಬೈಕ್ ಮೇಲೆ ನಿರ್ಜನ ಪ್ರದೇಶಕ್ಕೆ ತೆರಳಿ, ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ. ಈ ಕುರಿತು ಗೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.