ಯಾದಗಿರಿ: ವ್ಯಕ್ತಿಯೊಬ್ಬರಿಂದ ನೇಮಕಾತಿ ವಿಚಾರವಾಗಿ ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಎಂ.ಎಸ್. ಪಾಟೀಲ್ ಹಾಗೂ ಜಿಲ್ಲಾ ಕುಟುಂಬ ಆಯೋಜನಾಧಿಕಾರಿ ಸಿದ್ದಣಗೌಡ 25 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗುತ್ತಿದೆ.