ಯಾದಗಿರಿ:ನಿಜಶರಣ ಅಂಬಿಗರ ಚೌಡಯ್ಯ ಭವನಕ್ಕೆ ಐದು ವರ್ಷಗಳ ಹಿಂದೆ 1 ಕೋಟಿ ರೂ. ಅನುದಾನ ಬಿಡುಗಡೆಯಾಗಿದರೂ ಕೂಡ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಅಧಿಕಾರಿಗಳು ಕಾಮಗಾರಿಯನ್ನು ಚುರುಕುಗೊಳಿಸಬೇಕೆಂದು ಜಿಲ್ಲಾ ಟೋಕ್ರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ್ ಮುದ್ನಾಳ ಆಗ್ರಹಿಸಿದ್ದಾರೆ.
ಅಂಬಿಗರ ಚೌಡಯ್ಯ ಭವನ ಕಾಮಗಾರಿ ಚುರುಕುಗೊಳಿಸಲು ಆಗ್ರಹ - ನಿಜಶರಣ ಅಂಬಿಗರ ಚೌಡಯ್ಯ ಭವನದ ಕಾಮಗಾರಿ ಚುರುಕುಗೊಳಿಸಿ ಎಂದ ಉಮೇಶ್ ಮುದ್ನಾಳ
ನಿಜಶರಣ ಅಂಬಿಗರ ಚೌಡಯ್ಯ ಭವನಕ್ಕೆ ಐದು ವರ್ಷಗಳ ಹಿಂದೆ 1 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದರೂ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಹೀಗಾಗಿ ಅಧಿಕಾರಿಗಳು ಕಾಮಗಾರಿಯನ್ನು ಚುರುಕುಗೊಳಿಸಬೇಕೆಂದು ಜಿಲ್ಲಾ ಟೋಕ್ರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ್ ಮುದ್ನಾಳ ಆಗ್ರಹಿಸಿದ್ದಾರೆ.
ಜಿಲ್ಲೆಯ ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಯರಗೋಳಾ ಗ್ರಾಮದಲ್ಲಿ ಅಂಬಿಗರ ಚೌಡಯ್ಯ ಭವನ ನಿರ್ಮಾಣಕ್ಕೆ 2013-14ನೇ ಸಾಲಿನಲ್ಲಿ ಸರ್ಕಾರ ಒಂದು ಕೋಟಿ ಅನುದಾನ ನೀಡಿದ್ದು, ಅದರಲ್ಲಿ 50 ಲಕ್ಷ ಹಣ ಬಿಡುಗಡೆ ಆದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣವಾಗದ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ, ನಿರ್ಮಿತಿ ಕೇಂದ್ರದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಕಾಮಗಾರಿ ಪೂರ್ಣಗೊಳ್ಳಲು ವಿಳಂಬವಾಗಿದೆ ಎಂದು ಆರೋಪಿಸಿದ್ದಾರೆ.
ಸಮುದಾಯ ಭವನದ ಪಕ್ಕದಲ್ಲಿ ಇರುವ ಭೀಮೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕರು ಶುಭ ಕಾರ್ಯ ನಡೆಸುತ್ತಿದ್ದು, ಸಮುದಾಯ ಭವನದ ಕಾಮಗಾರಿ ಪೂರ್ಣಗೊಂಡರೆ ಶುಭ ಕಾರ್ಯ ನಡೆಸಲು ಜನರಿಗೆ ಅನುಕೂಲವಾಗಲಿದೆ. ಕೂಡಲೇ ಅಧಿಕಾರಿಗಳು ಕಾಮಗಾರಿ ತ್ವರಿತ ಗತಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
TAGGED:
ನಿಜಶರಣ ಅಂಬಿಗರ ಚೌಡಯ್ಯ ಭವನ