ಕರ್ನಾಟಕ

karnataka

ETV Bharat / state

ಲಾರಿ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು - ಲೆಟೆಸ್ಟ್ ಯಾದಗಿರಿ ನ್ಯೂಸ್

ಲಾರಿಯು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ನಗರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಲಾರಿ-ಬೈಕ್ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ದುರ್ಮರಣ

By

Published : Nov 16, 2019, 8:19 AM IST

ಯಾದಗಿರಿ: ಅನ್ನ ಭಾಗ್ಯದ ಅಕ್ಕಿ ಲಾರಿಯು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ನಗರದ ಚಟಾನ್​ಗಲ್ಲಿ ನಿವಾಸಿ ವಾಜೀದ್ (22) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಶುಕ್ರವಾರದಂದು ಸುರಪುರ ನಗರದಲ್ಲಿನ ಪಡಿತರ ಅಂಗಡಿಗೆ ಅನ್ನ ಭಾಗ್ಯದ ಅಕ್ಕಿ ಮೂಟೆಗಳನ್ನು ಸರಬರಾಜು ಮಾಡಿ ಯಾದಗಿರಿ ನಗರದ ಹೊಸಳ್ಳಿ ಕ್ರಾಸ್​ನ ಗೊದಾಮಿಗೆ ಲಾರಿ ವಾಪಸ್ಸು ತೆರಳುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರಿಂದ ಪರಿಶೀಲನೆ ಕಾರ್ಯ ಆರಂಭವಾಗಿದೆ. ಸದ್ಯ ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details