ಕರ್ನಾಟಕ

karnataka

ETV Bharat / state

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ - ಯಾದಗಿರಿ ಅಬಕಾರಿ ಇಲಾಖೆ ಅಧಿಕಾರಿಗಳು

ಜಿಲ್ಲೆಯಲ್ಲಿ ಅಕ್ರಮವಾಗಿ ಬೆಳೆಯಲಾಗುತ್ತಿದ್ದ ಸುಮಾರು 70 ಸಾವಿರ ಮೌಲ್ಯದ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

marijuana
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

By

Published : Nov 7, 2020, 9:05 PM IST

ಯಾದಗಿರಿ: ಅಕ್ರಮವಾಗಿ ಜಮೀನೊಂದರಲ್ಲಿ ಗಾಂಜಾ ಬೆಳೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 70 ಸಾವಿರ ಮೌಲ್ಯದ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.

ಯಾದಗಿರಿ ತಾಲ್ಲೂಕಿನ ಆಶನಾಳ ಗ್ರಾಮದ ಸಾಬಣ್ಣ ಎಂಬಾತನೆ ಬಂಧಿತ ಆರೋಪಿ. ಆರೋಪಿಗೆ ಸೇರಿದ ಜಮೀನಿನ ಬೆಳೆಯಲ್ಲಿ ಅಕ್ರಮವಾಗಿ 70 ಸಾವಿರ ಮೌಲ್ಯದ ಏಳು ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಅಬಕಾರಿ ಇಲಾಖೆ ಜಂಟಿ ಆಯುಕ್ತ ಎಸ್. ಕೆ. ಕುಮಾರ ಹಾಗೂ ಯಾದಗಿರಿ ಉಪ ಆಯುಕ್ತ ಸಂಗನಗೌಡ ಹೊಸಳ್ಳಿ ಅವರ ನೇತ್ರತ್ವದಲ್ಲಿ ದಾಳಿ ನಡೆಸಿ ಅಕ್ರಮವಾಗಿ ಬೆಳೆಯಲಾದ ಗಾಂಜಾ ವಶಪಡಿಸಿಕೊಂಡು ಆರೋಪಿ ಸಾಬಣ್ಣನನ್ನ ಬಂಧಿಸಿದ್ದಾರೆ.

ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಆರೋಪಿ ಸಾಬಣ್ಣನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ABOUT THE AUTHOR

...view details