ಸುರಪುರ :ಅರಕೇರಾ ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಆಗ್ರಹಿಸಿ ತಾಲೂಕು ಪಂಚಾಯತ್ ಮುಂದೆ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.
ಸುರಪುರ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಆಗ್ರಹಿಸಿ ಕೃಷಿ ಕೂಲಿಕಾರರ ಪ್ರತಿಭಟನೆ - surapura latest news
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅರಕೇರಾ ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಲಿಕಾರರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕೃಷಿ ಕೂಲಿಕಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ..
ಪ್ರತಿಭಟನೆ
ನೂರಕ್ಕೂ ಹೆಚ್ಚು ಕೂಲಿಕಾರರು ತಾಲೂಕು ಪಂಚಾಯತ್ ಕಚೇರಿಯ ಬಾಗಿಲು ಬಂದ್ ಮಾಡಿ ಧರಣಿ ನಡೆಸಿದರು. ಕೃಷಿ ಕೂಲಿಕಾರರು, ಎಲ್ಲರಿಗೂ ಉದ್ಯೋಗ ನೀಡಬೇಕು ಮತ್ತು ಈಗಾಗಲೇ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ನೀಡಬೇಕು ಮತ್ತು ಫಾರಂ ನಂಬರ್-6ರ ಪ್ರಕಾರ ಕೆಲಸ ನೀಡಲು ವಿಳಂಬ ಮಾಡಿದ್ದಕ್ಕಾಗಿ ಕಾರ್ಮಿಕರಿಗೆ ಪರಿಹಾರದ ಹಣ ನೀಡಬೇಕೆಂದು ಆಗ್ರಹಿಸಿದರು.
ಧರಣಿ ನಿರತರ ಬಳಿಗೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ವಿಶ್ವನಾಥ ಯಾದಗಿರ ಆಗಮಿಸಿ, ಕೂಲಿಕಾರರ ಮನವಿ ಸ್ವೀಕರಿಸಿದರು. ಇನ್ನೆರಡು ದಿನಗಳಲ್ಲಿ ಕೆಲಸ ನೀಡುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.