ಕರ್ನಾಟಕ

karnataka

ETV Bharat / state

ಯಾದಗಿರಿಗೆ ಮೆಡಿಕಲ್​ ಕಾಲೇಜಿನ ಅವಶ್ಯಕತೆ ಇಲ್ಲ: ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ - undefined

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆಗೆ ಸರ್ಕಾರಿ ಮೆಡಿಕಲ್​ ಕಾಲೇಜಿನ ಅವಶ್ಯಕತೆಯಿಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಎಐಡಿಎಸ್ಓ ಸಂಘಟನೆ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Yadgiri

By

Published : Jul 7, 2019, 4:58 AM IST

ಯಾದಗಿರಿ:ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆಗೆ ಸರ್ಕಾರಿ ಮೆಡಿಕಲ್​ ಕಾಲೇಜಿನ ಅವಶ್ಯಕತೆಯಿಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಅಖಿಲ ಕರ್ನಾಟಕ ಎಐಡಿಎಸ್ಓ ಸಂಘಟನೆ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲೆಗೆ ಮೆಡಿಕಲ್​ ಕಾಲೇಜು​​ ಬೇಡ ಎಂಬ ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ

ನಗರದ ಸರ್ಕಾರಿ ಪದವಿ ಕಾಲೇಜಿನ ಮುಂಭಾಗದಿಂದ ಪ್ರತಿಭಟನೆ ಪ್ರಾರಂಭಿಸಿದ ಕಾರ್ಯಕರ್ತರು ಸುಭಾಶ ವೃತ್ತದವರಿಗೂ ನಡೆಸಿದರು. ರಾಜ್ಯ ಸರ್ಕಾರದಿಂದ ಮಂಜೂರಾದ ಸರ್ಕಾರಿ ಮೆಡಿಕಲ್​ ಕಾಲೇಜನ್ನು ಸಿಎಂ ಕುಮಾರಸ್ವಾಮಿ ಕೈ ಬಿಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಜಿಲ್ಲೆಗೆ ಮೆಡಿಕಲ್​ ಕಾಲೇಜನ್ನು ಮಂಜೂರ ಮಾಡಬೇಕೆಂದು ಆಗ್ರಹಿಸಿದರು.

ಶಿಕ್ಷಣ, ಸಾಮಾಜಿಕ, ಆರ್ಥಿಕವಾಗಿ ಜಿಲ್ಲೆ ತೀರ ಹಿಂದುಳಿದಿದ್ದು, ಇಂತಹ ಪರಿಸ್ಥಿತಿಯಲ್ಲಿ ಮಂಜೂರಾದ ಸರ್ಕಾರಿ ಕಾಲೇಜನ್ನು ಸಿಎಂ ಕೈ ಬಿಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

For All Latest Updates

TAGGED:

ABOUT THE AUTHOR

...view details