ಕರ್ನಾಟಕ

karnataka

ಸರ್ಕಾರದ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪ್ರತಿಭಟನೆ

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಏವೂರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಇದರಿಂದ ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ತೊಂದರೆಗೆ ಒಳಗಾಗಿದ್ದಾರೆ ಎಂದು ಆರೋಪಿಸಿತು.

By

Published : Jun 30, 2020, 1:26 AM IST

Published : Jun 30, 2020, 1:26 AM IST

All India Farmers Conflict Coordination Committee protest
ಸರ್ಕಾರದ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪ್ರತಿಭಟನೆ

ಸುರಪುರ:ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯು ಸುರಪುರ ತಾಲೂಕಿನ ಏವೂರು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿತು.

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಪ್ರತಿಭಟನೆ

ಪಂಚಾಯಿತಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಶರಣಗೌಡ ಗೂಗಲ್ ಮಾತನಾಡಿ, ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಇದರಿಂದ ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ತೊಂದರೆಗೆ ಒಳಗಾಗಿದ್ದಾರೆ. ಕೊರೊನಾ ಹಾವಳಿ ನಿಯಂತ್ರಿಸುವಲ್ಲಿ ಸಹ ಸಂಪೂರ್ಣವಾಗಿ ವಿಫಲವಾಗಿದೆ. ನೂರಾರು ಜನ ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಜನ ಸೋಂಕಿನಿಂದ ಬಳಲುತ್ತಿದ್ದಾರೆ. ರೈತರಿಗೆ ಸರಿಯಾದ ಸೌಲಭ್ಯಗಳಿಲ್ಲದೆ ವ್ಯವಸಾಯ ಮಾಡದಂತಹ ಸ್ಥಿತಿ ಬಂದೊದಗಿದೆ. ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆ ಹಳ್ಳ ಹಿಡಿದಿದ್ದು, ಕಾರ್ಮಿಕರಿಗೆ ಕೆಲಸ ಸಿಗದೆ ಯೋಜನೆಯ ಹಣ ಉಳ್ಳವರ ಪಾಲಾಗುತ್ತಿದೆ ಎಂದು ಆರೋಪಿಸಿದರು.

ನಂತರ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ABOUT THE AUTHOR

...view details