ಯಾದಗಿರಿ :ಫೆ.25 ರಂದು ನಡೆದ ಸಿಲಿಂಡರ್ ದುರಂತದಲ್ಲಿ 24 ಜನ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 13ಕ್ಕೆ ತಲುಪಿದೆ.
ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಪೈಕಿ ಮಹಾರಾಷ್ಟ್ರದ ಸೋಲಾಪುರ ಗಂಗಾಮಯಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುಮಂಗಲ ಹಳ್ಳದ (50) ಹಾಗೂ ಹನುಮಂತರಾಯ ಇಜೇರಿ (50) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ.
ಮೃತ ಕುಟುಂಬಸ್ಥರಿಗೆ ಸವದಿ, ಸಚಿವ ಬೈರತಿ ಬಸವರಾಜ ಸಾಂತ್ವನ:ಇಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಭೇಟಿ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.