ಯಾದಗಿರಿ: ಮಾಸಿಕ ವೇತನ 12 ಸಾವಿರ ನಿಗದಿಗಾಗಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಯಾದಗಿರಿಯಲ್ಲಿಂದು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲೆಯ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಕಳೆದ 10-11 ವರ್ಷಗಳಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರಿಗೆ ಸರ್ಕಾರದಿಂದ ನೀಡುವ ವೇತನ ಅತಿ ಕಡಿಮೆಯಾಗಿದ್ದು, ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಿದೆ. ಕೊರೊನಾ ಸಂದರ್ಭಗಳಲ್ಲಿ ನಾವು ಮಾಡಿದ ಸೇವೆಗಾಗಿ ದೊರಕುವ ಸಂಭಾವನೆ ಕಡಿಮೆಯಾಗಿದ್ದು, ಕಳೆದ 15 ತಿಂಗಳ ಪ್ರೋತ್ಸಾಹ ಧನ ಕೂಡ ಬಿಡುಗಡೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.