ಕರ್ನಾಟಕ

karnataka

ETV Bharat / state

ಬಸವಸಾಗರ ಜಲಾಶಯ ಭರ್ತಿ: ಕೃಷ್ಣಾ ನದಿ ಪಾತ್ರದ ಜನತೆಗೆ ಪ್ರವಾಹ ಭೀತಿ

ಮಹಾರಾಷ್ಟ್ರ ಸೇರಿದಂತೆ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಇರುವ ಜಲಾಶಯಕ್ಕೆ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿ ಬಿಡಲಾಗುತ್ತಿದೆ. ಹೀಗಾಗಿ, ಬಸವಸಾಗರ ಜಲಾಶಯದ ಒಳಹರಿವು ಹೆಚ್ಚಾಗಿದೆ.

basavasagar
ಬಸವಸಾಗರ ಜಲಾಶಯ

By

Published : Sep 27, 2020, 5:10 AM IST

ಯಾದಗಿರಿ: ಜಿಲ್ಲೆಯ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತೆ ಅಪಾರ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಮಹಾರಾಷ್ಟ್ರ ಸೇರಿದಂತೆ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹುಣಸಗಿ ತಾಲೂಕಿನ ನಾರಾಯಣಪುರ ಜಲಾಶಯಕ್ಕೆ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿ ಬಿಡಲಾಗುತ್ತಿದೆ. ಹೀಗಾಗಿ, ಬಸವಸಾಗರ ಜಲಾಶಯದ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಜಲಾಶಯದಿಂದ 1.61 ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹೊರ ಬಿಡಲಾಗಿದ್ದು, ನದಿಯು ಅಪಯದ ಮಟ್ಟ ಮೀರಿ ಹರಿಯುವ ಸಾಧ್ಯತೆ ಹೆಚ್ಚಾಗಿದೆ.

ಬಸವಸಾಗರ ಜಲಾಶಯ

33.313 ಟಿಎಂಸಿ ಒಟ್ಟು ಸಾಮರ್ಥ್ಯ ಹೊಂದಿದ ಬಸವಸಾಗರ ಜಲಾಶಯದಲ್ಲಿ 32.23 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಳ ಹರಿವಿನ ಪ್ರಮಾಣ 1.40 ಲಕ್ಷ ಕ್ಯೂಸೆಕ್​ಗೆ ತಲುಪಿದೆ. ಇನ್ನೂ ಮಳೆ ಪ್ರಮಾಣ ಹೆಚ್ಚಾದರೆ ಜಲಾಶಯದಿಂದ 2 ಲಕ್ಷ ಕ್ಯೂಸೆಕ್ ನಷ್ಟು ನೀರು ನದಿಗೆ ಬಿಡುವ ಸಾಧ್ಯತೆಗಳಿವೆ ಎಂದು ಕೆಬಿಜೆಎನ್​ಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇ ಕೃಷ್ಣಾ ನದಿ ಪಾತ್ರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ನದಿ ತೀರದಲ್ಲಿ ಜನ ಜಾನುವಾರುಗಳ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ABOUT THE AUTHOR

...view details