ಯಾದಗಿರಿ: ವೇಗವಾಗಿ ಚಲಿಸುತ್ತಿದ್ದ ಬೈಕ್ ಆಯ ತಪ್ಪಿ ರಸ್ತೆ ಬದಿ ತಡೆಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು - bike accident in yadagiri
ಯಾದಗಿರಿ ತಾಲೂಕಿನ ಅಲ್ಲಿಪೂರ ಹತ್ತಿರದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಬೈಕ್ ಆಯತಪ್ಪಿ ರಸ್ತೆ ಬದಿಯ ತಡೆಗಲ್ಲಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರನನ್ನು ಜಿಲ್ಲಾಸ್ಪತ್ರೆಗೆ ದಾಖಳಿಸಲಾಗಿದೆ.
ಬೈಕ್ ಸವಾರ ಸ್ಥಳದಲ್ಲೇ ಸಾವು
ತಾಲೂಕಿನ ಅಲ್ಲಿಪೂರ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ದುರ್ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ನಾಲವಾರ ಗ್ರಾಮದ ನಿವಾಸಿ ಹೊನ್ನಪ್ಪ (35) ಎಂಬಾತ ಮೃತಪಟ್ಟಿದ್ದಾನೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.