ಯಾದಗಿರಿ :ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಗುಂಡಳ್ಳಿ ಇಬ್ರಾಹಿಂಪುರ ಗ್ರಾಮದ ರಸ್ತೆಯಲ್ಲಿ ನಡೆದಿದೆ.
ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ: ಸವಾರ ಸಾವು - ಬೈಕ್ ಸವಾರ ಸಾವು
ಜಿಲ್ಲೆಯ ಶಹಪುರ ತಾಲೂಕಿನ ಗುಂಡಳ್ಳಿ ಇಬ್ರಾಹೀಂಪುರ ಗ್ರಾಮದ ರಸ್ತೆಯಲ್ಲಿ ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
![ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ: ಸವಾರ ಸಾವು ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ](https://etvbharatimages.akamaized.net/etvbharat/prod-images/768-512-5609419-thumbnail-3x2-bngs.jpg)
Bike and tractor accident
ಗುಂಡಳ್ಳಿ ತಾಂಡಾದ ನಿವಾಸಿ ದೇವರಾಜ (30) ಮೃತಪಟ್ಟ ವ್ಯಕ್ತಿ. ದೇವರಾಜ ಮತ್ತು ಆತನ ಸ್ನೇಹಿತ ಸುನಿಲ್ ಬೈಕ್ ಮೇಲೆ ತೆರಳುತ್ತಿರುವಾಗ ಟ್ರ್ಯಾಕ್ಟರ್ ಚಾಲಕ ಬಲಗಡೆಯಿಂದ ಬಂದು ಕಟ್ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದೇವರಾಜಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ. ಬೈಕ್ ಹಿಂಬದಿ ಸವಾರ ಸುನಿಲ್ಗೂ ಗಂಭೀರವಾಗಿ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.