ಯಾದಗಿರಿ:ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಶಶೀಲ್ ನಮೋಷಿ ಸೇರಿದಂತೆ ಇನ್ನಿಬ್ಬರು ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿ...ಪಾರಾದ ಬಿಜೆಪಿ ಮುಖಂಡ ಶಶೀಲ್ ನಮೋಷಿ - traffic accident
ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
![ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿ...ಪಾರಾದ ಬಿಜೆಪಿ ಮುಖಂಡ ಶಶೀಲ್ ನಮೋಷಿ](https://etvbharatimages.akamaized.net/etvbharat/prod-images/768-512-5013077-thumbnail-3x2-accident.jpg)
bjp leader met the an accident at yadagiri
ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಬಳಿ ಈ ಘಟನೆ ಕಳೆದ ರಾತ್ರಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹೊಲಕ್ಕೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ.
ಸುರಪುರದಿಂದ ಕಲಬುರಗಿ ನಗರದತ್ತ ಶಶೀಲ ನಮೋಶಿ ಕಾರಿನಲ್ಲಿ ಹೊರಟಿದ್ದರು. ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿದಾಗ ಈ ಅಪಘಾತ ಸಂಭವಿಸಿದೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.