ಸುರಪುರ: ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮೇಲೆ ನಡೆದ ಹಲ್ಲೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಕೆಂಭಾವಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ತೇಜಸ್ವಿ ಸೂರ್ಯ ಮೇಲಿನ ಹಲ್ಲೆಗೆ ಖಂಡನೆ: ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ - Assaulting on Tejaswi Surya in West Bengal
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಮೇಲೆ ನಡೆದ ಹಲ್ಲೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕೆಂಭಾವಿಯಲ್ಲಿ ಪ್ರತಿಭಟನೆ ನಡೆಸಿದ್ದು, ಮಮತಾ ಬ್ಯಾನರ್ಜಿ ಅವರ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು.
![ತೇಜಸ್ವಿ ಸೂರ್ಯ ಮೇಲಿನ ಹಲ್ಲೆಗೆ ಖಂಡನೆ: ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ BJP Yuva Morcha Protesting](https://etvbharatimages.akamaized.net/etvbharat/prod-images/768-512-9111795-815-9111795-1602239060120.jpg)
ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ
ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ
ಪಶ್ಚಿಮ ಬಂಗಾಳದಲ್ಲಿನ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಸರ್ಕಾರ ಗೂಂಡಾಗಿರಿ ಪ್ರದರ್ಶಿಸುತ್ತಿದೆ. ಓರ್ವ ಸಂಸದನ ಮೇಲೆ ಹಲ್ಲೆ ನಡೆಸುವ ಮೂಲಕ ಸಂವಿಧಾನದ ಆಶಯಗಳನ್ನು ಕಡೆಗಣಿಸಿದೆ. ಆದ್ದರಿಂದ ಮಮತಾ ಬ್ಯಾನರ್ಜಿಯವರ ಸರ್ಕಾರವನ್ನು ವಜಾಗೊಳಿಸಬೇಕು ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮೇಲೆ ಹಲ್ಲೆ ನಡೆಸಿದ ಗೂಂಡಾಗಳನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ಬಳಿಕ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಕೆಂಭಾವಿ ಉಪ ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.