ಗುರುಮಠಕಲ್(ಯಾದಗಿರಿ):ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ ಚಾಲಕ ವೇಗವಾಗಿ ಬಸ್ ಚಾಲನೆ ಮಾಡಿದ ಪರಿಣಾಮ ಬಸ್ ಪಲ್ಟಿಯಾಗಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಗೊಂಡವರನ್ನು ತೆಲಂಗಾಣದ ನಾರಾಯಣಪೇಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಯಾದಗಿರಿ ಗಡಿಭಾಗವಾದ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಯತ್ಲಾಸಪುರ ಗ್ರಾಮದ ಸಮೀಪದ ಲೋಕಪಲ್ಲಿ ಬಳಿ ದುರ್ಘಟನೆ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಸೇಡಂ ಡಿಪೋದ ಬಸ್ ಗುರುಮಠಕಲ್ನಿಂದ ಬೆಳಗ್ಗೆ ಹೈದರಾಬಾದ್ಗೆ ತೆರಳುತ್ತಿತ್ತು. ಲೋಕಪಲ್ಲಿ ರಸ್ತೆ ತಿರುವಿನಲ್ಲಿ ಚಾಲಕ ವೇಗವಾಗಿ ಬಸ್ ಚಾಲನೆ ಮಾಡಿದ ಪರಿಣಾಮ ಬಸ್ ಪಲ್ಟಿಯಾಗಿದೆ. ಚಾಲಕ ಹಾಗೂ ನಿರ್ವಾಹಕ ಸೇರಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.